Article Ads 1

ಊಟಕ್ಕೆ ಸಂಬಂಧಿಸಿದ ಗಾದೆಗಳು

ಊಟಕ್ಕೆ ಸಂಬಂಧಿಸಿದ ಗಾದೆಗಳು


  1. ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
  2. ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
  3. ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
  4. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
  5. ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ‍್ಣ ಕೇಳಿದಂಗೆ
  6. ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
  7. ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
  8. ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
  9. ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
  10. ಒಂದು ಹೊತ್ತು ಉಂಡವ ಯೋಗಿ, ಎರಡು ಹೊತ್ತು ಉಂಡವ ಭೋಗಿ, ಮೂರು ಹೊತ್ತು ಉಂಡವ ರೋಗಿ, ನಾಲ್ಕು ಹೊತ್ತು ಉಂಡವನ್ನ ಹೊತ್ತುಕೊಂಡು ಹೋಗಿ
  11. ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
  12. ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
  13. ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
  14. ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
  15. ಉಂಡ ಮನೆ ಜಂತೆ ಎಣಿಸಬಾರದು
  16. ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
  17. ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
  18. ಉಂಬಾಗ ಉಡುವಾಗ ಊರೆಲ್ಲ ನೆಂಟರು
  19. ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
  20. ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ
  21. ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
  22. ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.

Post a Comment

0 Comments

Article Ads 3