Article Ads 1

ಮಾತಿಗೆ ಸಂಬಂಧಿಸಿದ ಗಾದೆಗಳು

 

  1. ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
  2. ಮಾತು ಬೆಳ್ಳಿ, ಮೌನ ಬಂಗಾರ.
  3. ಮಾತು ಮನೆ ಮುರೀತು, ತೂತು ಓಲೆ ಕೆಡಿಸಿತು.
  4. ಮಾತೇ ಮುತ್ತು; ಮಾತೇ ಮೃತ್ಯು
  5. ಇದ್ದದ್ದು ಇದ್ದಂತೆ ಹೇಳಿದರೆ ಹದ್ದಿನಂತ ಮೋರೆ ಆಯಿತು
  6. ಉದ್ದುದ್ದ ಮಾತಿನವರ ಮೊಳಕೈ ಮೊಂಡ.
  7. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
  8. ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
  9. ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
  10. ನಿಜ ಆಡಿದರೆ ನಿಷ್ಠೂರ
  11. ಮುತ್ತು ಒಡೆದರೆ ಹೊಯ್ತು, ಮಾತು ಆಡಿದರೆ ಹೊಯ್ತು
  12. ಇದ್ದದ್ದು ಇದ್ದಂತೆ ಹೇಳಿದರೆ ಎದ್ದು ಬಂದು ಎದೆಗೆ ಒದ್ನಂತೆ
  13. ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
  14. ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
  15. ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
  16. ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
  17. ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
  18. ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
  19. ಬೇಸರವಿರಬಾರದು, ಅವಸರ ಮಾಡಬಾರದು. ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
  20. ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
  21. ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
  22. ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
  23. ಆಡೋದು ಮಡಿ ಉಂಬೋದು ಮೈಲಿಗೆ

Post a Comment

0 Comments

Article Ads 3