ಸಂಬಂಧಗಳನ್ನು ನೆನಪಿಸುವ ಗಾದೆಗಳು
ಸಂಬಂಧಗಳನ್ನು ನೆನಪಿಸುವ ಗಾದೆಗಳು
- ಅಜ್ಜ! ಮದುವೆ ಅಂದ್ರೆ ನನಗೋ ಅಂದ
- ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
- ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
- ಅಕ್ಕ ಬರಬೇಕು ಅಕ್ಕಿ ಮುಗೀಬಾರದು
- ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
- ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
- ಅಕ್ಕನ ಚಿನ್ನವಾದ್ರೂ ಅಕ್ಕಸಾಲಿ ಟೊಣೆಯದೆ(=ಕದಿಯದೆ) ಬಿಡ
- ಅಕ್ಕನ ಹಗೆ ಬಾವನ ನಂಟು
- ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
- ಅಕ್ಕರೆಯಿದ್ದಲ್ಲಿ ದುಃಖವುಂಟು
- ಅಕ್ಕಿ ಅಂದ್ರೆ ಪ್ರಾಣ, ನೆಂಟ್ರು ಅಂದ್ರೆ ಜೀವ
- ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
- ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
- ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
- ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
- ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
- ಅರಗಿನಂತೆ ತಾಯಿ, ಮರದಂತೆ ಮಕ್ಕಳು
- ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
- ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
- ಹೆತ್ತವರು ಹೆಸರಿಕ್ಕ ಬೇಕು
- ಅಜ್ಜ! ಮದುವೆ ಅಂದ್ರೆ ನನಗೋ ಅಂದ
- ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
- ಅಕ್ಕನ ಹಗೆ ಬಾವನ ನೆಂಟು
- ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
- ಅಕ್ಕ ಬರಬೇಕು ಅಕ್ಕಿ ಮುಗೀಬಾರದು
- ತಬ್ಬಲಿ ತಬಕು (ಎಲೆ ಅಡಿಕೆ ತಟ್ಟೆ, ತಂಬಾಕು ತಟ್ಟೆ) ಕದ್ದು ಜಗಲೀಲಿ ಸಿಕ್ಕಿಬಿದ್ದ
- ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?
- ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
- ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ
- ತಮ್ಮ ಸಂಗಡ ತಂಗಿಯ ಗಂಡ ದೂರು ಹೇಳಿದರೆ ನಿನಗೇನಪ್ಪ
0 Comments